ಪ್ರತಿಭಾ ಕಾರಂಜಿ ಮಕ್ಕಳ ಭವಿಷ್ಯಕ್ಕೆ ಉತ್ತಮ ವೇದಿಕೆ: ತಹಶೀಲ್ದಾರ್ ನಾಯಕಲಮಠ
ಕೊಲ್ಹಾರ: ಆ.21:ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸರಕಾರ ಪ್ರತಿಭಾ ಕಾರಂಜಿಯನ್ನು ಆಯೋಜಿಸುತ್ತಿದ್ದು ಇದು ಮಕ್ಕಳ ಭವಿಷ್ಯಕ್ಕೆ ಇರುವ ಉತ್ತಮ ವೇದಿಕೆಯಾಗಿದೆ ಎಂದು ತಹಶೀಲ್ದಾರ್ ಎಸ್.ಎಸ್ ನಾಯಕಲಮಠ ಹೇಳಿದರು.
ಪಟ್ಟಣದ ಎಪಿಜೆ ಅಬ್ದುಲ್ ಕಲಾಂ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಉಸ್ಮಾನ್ ಪಟೇಲ ಖಾನ್ ಮಾತನಾಡಿ ನಮ್ಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಆಯೋಜಿಸಿರುವುದು ತುಂಬಾ ಖುಷಿ ತಂದಿದ್ದು
ಮಕ್ಕಳು ಕೇವಲ ಪಠ್ಯಕ್ಕಷ್ಟೇ ಸೀಮಿತರಾಗಬಾರದು. ಅವರಲ್ಲಿರುವ ವಿಭಿನ್ನವಾದ ಜ್ಞಾನ, ಕೌಶಲ ತೋರಿಸಲು ಇದು ಉತ್ತಮ ಅವಕಾಶ. ಅದರ ಪ್ರಯೋಜನ ಪಡೆದು ಮುಂದೆ ಬರಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕಥೆ ಹೇಳುವಿಕೆ, ಅಭಿನಯ ಗೀತೆ, ಭಕ್ತಿ ಗೀತೆ, ಛದ್ಮವೇಷ, ಆಶುಭಾಷಣ, ದೇಶಭಕ್ತಿ ಗೀತೆ, ಜಾನಪದ ನೃತ್ಯ, ರಸಪ್ರಶ್ನೆ, ಭಾಷಣ, ಮಿಮಿಕ್ರಿ, ಭರತನಾಟ್ಯ, ಚರ್ಚಾ ಸ್ಪರ್ಧೆ, ನೃತ್ಯ, ಸಂಗೀತ, ರಂಗೋಲಿ, ದೃಶ್ಯ ಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಆರ್.ಬಿ ಪಕಾಲಿ, ಬಿ.ಎಸ್ ಹಂಗರಗಿ, ಎಸ್.ಬಿ ಪತಂಗಿ ಸಿ.ಆರ್.ಪಿ ಗಂಗಪ್ಪ ಗೋಡಿಹಾಳ,ಶಿಕ್ಷಕ ವರ್ಗ ಸಹಿತ ಅನೇಕರು ಉಪಸ್ಥಿತರಿದ್ದರು,