ಅಸಮಾನತೆ ಹೋಗಲಾಡಿಸಿ ಸಮಾನತೆಯ ಹಾದಿಯಲ್ಲಿ ನಡೆಯೋಣ: ಎಂ.ಎಸ್.ದಿವಾಕರ
ಸಂಜೆವಾಣಿ ವಾರ್ತೆ
ಹೊಸಪೇಟೆ (ವಿಜಯನಗರ) ಆ21: ದಲಿತ ಪದ್ಧತಿ, ಜೀತ ಪದ್ಧತಿಗಳಂತ ಸಾಮಾಜಿಕ ಪಿಡುಗುಗಳನ್ನು ತೋಡಗಿಸಿ ಸಮಾನತೆಯ ಹಾದಿಯಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸು ಅವರು ಕರ್ನಾಟಕ ಕಂಡ ಧೀಮಂತ ನಾಯಕ. ಹೇಗೆ ಡಾ.ಬಿ.ಆರ್.ಆಂಬೆಡ್ಕರ್ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೋ ಹಾಗೆ ಡಿ.ದೇವರಾಜ ಅರಸು ರವರು ಕರ್ನಾಟಕ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಎರಡು ಬಾರಿ ಮುಖ್ಯ ಮಂತ್ರಿಗಳಾಗಿದ್ದ, ಅವರು ಸಣ್ಣ ಗ್ರಾಮದಿಂದ ಬಂದಂತವರು, ಹುಟ್ಟುತ್ತಲೆ ಅರಸು ಮನೆತನದಿಂದ ಬಂದವರಾದರೂ ಬಡತನವನ್ನು ಕಣ್ಣಾರೆಕಂಡವರು. ಡಿ.ದೇವರಾಜ ಅರಸು ಅವರು ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದವರಾಗಿದ್ದರು. ಚಳುವಳಿಗಳ ಮೂಲಕ ಸಾಮಾಜದಲ್ಲಿನ ದಲಿತ ಪದ್ಧತಿ, ಜೀತ ಪದ್ಧತಿಗಳನ್ನು ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಇಂತಹ ಮಹಾನ್ ವ್ಯಕ್ತಿಗಳ ಹಾದಿಯಲ್ಲೆ ನಾವೆಲ್ಲ ನಡೆಯೋಣ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಆಧ್ಯಕ್ಷರು ಹಾಗೂ ನಿವೃತ್ತ ಉಪನ್ಯಾಸಕರಾದ ವೈ.ಯಮುನೇಶ ಅವರು ವಿಶೇಷ ಉಪನ್ಯಾಸ ನೀಡಿ, ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಹಳ ಕೊಡುಗೆ ನೀಡಿದ್ದಾರೆ. ಸಮಾಜದ ಏಳಿಗೆಗೆ ಅಪಾರ ಕಾಳಜಿ ಹೊಂದಿದ್ದ ಇವರು ಕರ್ನಾಟಕದಲ್ಲಿ ತುಳಿತಕ್ಕೊಳಗಾದ ಜಾತಿಗಳು ಮತ್ತು ಹಿಂದುಳಿದ ವರ್ಗಗಳನ್ನು ಗುರಿಯಾಗಿಸಿಕೊಂಡು ಅವರ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಎಂದು ಹೇಳಿದರು.
ಪ್ರತಿಭಾ ಪುರಸ್ಕಾರ: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿನ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎಸ್‍ಎಸ್‍ಎಲ್‍ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಎಲ್.ದ್ರಾವಿಡ್ ನಾಯ್ಕ ಪ್ರಥಮ ಸ್ಥಾನ, ಪವಿತ್ರಾ ಪಿ.ಎಸ್. ದ್ವಿತೀಯ ಸ್ಥಾನ, ಸುನಿತಾ ತೃತೀಯ ಸ್ಥಾನ ಹಾಗೂ ಪಿಯುಸಿ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಅಕ್ಷತಾ ಪ್ರಥಮ ಸ್ಥಾನ, ಆರ್.ಎಸ್.ಶಾಂತಿ ದ್ವಿತೀಯ ಸ್ಥಾನ ಹಾಗೂ ಗಂಗಮ್ಮ ತೃತೀಯ ಸ್ಥಾನ ಮತು ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿದ ವಿರೇಶ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತ್‍ನ ಉಪ ಕಾರ್ಯದಶಿಗಳಾದ ಭೀಮಪ್ಪ ಲಾಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಮತ್ತು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.