ವಾರ್ತಾ ಇಲಾಖೆ ವಾಹನ ಚಾಲಕÀ ಜಿ.ಬಿ. ತಾಟೆಗೆ ಆತ್ಮೀಯ ಬೀಳ್ಕೊಡುಗೆ
ಸಂಜೆವಾಣಿ ವಾರ್ತೆ,
ವಿಜಯಪುರ,ಅ.೨: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಕಚೇರಿಯಲ್ಲಿ ಕಳೆದ ೨೭ ವರ್ಷಗಳಿಂದ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಸೆ.೩೦ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾಹನ ಚಾಲಕÀ ಜಿ.ಬಿ.ತಾಟೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕÀ ಅಮರೇಶ ದೊಡಮನಿ ಅವರು ಮಾತನಾಡಿ, ಈ ಕಚೇರಿಯಲ್ಲಿ ಕಳೆದ ೨೭ ವರ್ಷಗಳಿಂದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಪತ್ರಕರ್ತರು ಸೇರಿದಂತೆ ಕಚೇರಿ ಸಿಬ್ಬಂದಿಯೊAದಿಗೆ ಅತ್ಯಂತ ಪ್ರೀತಿ, ವಿಶ್ವಾಸದಿಂದ ಯಾರ ಮನಸ್ಸಿಗೆ ನೋವು ಬಾರದ ಹಾಗೆ ನಡೆದುಕೊಳ್ಳುವ ಮೂಲಕ ಸರ್ಕಾರಿ ಸೇವೆಗೆ ವಿಶೇಷ ಗೌರವವನ್ನು ನೀಡಿ, ಇತರರಿಗೂ ಮಾದರಿಯಾಗಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನವು ಅತ್ಯಂತ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಮಂಜುಳಾ ದುರಗನ್ನವರ, ಸಿನಿ ಚಾಲಕÀ ಸುರೇಶ ಅಂಬಿಗೇರ, ಪ್ರಶಿಕ್ಷಣಾರ್ಥಿ ಶಿಲ್ಪಾ ಚವ್ಹಾಣ, ರಾಜು ಢವಳಗಿ, ಪ್ರಕಾಶ ಸೇರಿದಂತೆ ಮತ್ತಿತರರು ಇದ್ದರು.