ದತ್ತಪ್ಪ ಸಾಗನೂರ ವರ್ಗಾವಣೆಗೆ ಆಗ್ರಹಿಸಿ ಡಿಸಿಗೆ ಮನವಿ
ಕಲಬುರಗಿ:ಆ.21: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಕರವೇ ಕಾವಲುಪಡೆ ಜಿಲ್ಲಾಧ್ಯಕ್ಣ ಮಂಜುನಾಥ ನಾಲವಾರಕರ್ ಜಿಲ್ಲಾಧಿಕಾರಿಗಳ ಮುಖಾಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಡಾ. ಎಸ್. ಎಂ. ಪಂಡಿತ್ ರಂಗ ಮಂದಿರ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲರಾಗಿರುವ ಸಾಗನೂರ ಅವರು ಸ್ಥಳೀಯ ಕಲಾವಿದರಿಗೆ ಇಲಾಖೆಯಿಂದ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
1000 ಆಸನಗಳುಳ್ಳ ಪಂಡಿತ್ ರಂಗ ಮಂದಿರದ ಪಿಲ್ಲರ್ ಬಿರುಕು ಬಿಟ್ಟಿದೆ. ಮಳೆ ಬಂದರೆ ಛಾವಣಿ ಸೋರುತ್ತದೆ. ಅಲ್ಲಿ ಕೆಲಸ ಮಾಡುವವರಿಲ್ಲದೇ ಸ್ವಚ್ಛತೆ ಮರೀಚಿಕೆಯಾಗಿದೆ. ರಂಗಮಂದಿರ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದೆ. ಇವೆಲ್ಲವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವ ಸಾಗನೂರ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.