ದಿ ರಾಜೀವ್ ಗಾಂದಿ, ದಿ ದೇವರಾಜು ಅರಸು ದೇಶದ ಮಹಾನ್ ನಾಯಕರು

ರಾಯಚೂರು.ಆ೨೧:ದೇಶದ ಮಾಜಿ ಪ್ರಧಾನಿ ದಿ. ರಾಜೀವಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ದಿ. ದೇವರಾಜು ಅರಸು ಜಯಂತೋತ್ಸವ ನಿಮಿತ್ಯ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಸಂಸದ ಜಿ ಕುಮಾರ್ ನಾಯಕ ಅವರು ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರ ಸೇವೆಯನ್ನು ಸ್ಮರಿಸಿದರು.
ದಿ. ರಾಜೀವ್ ಗಾಂಧಿ ಹಾಗೂ ಹಿಂದುಳಿದ ನಾಯಕರು ಎಂದೆ ಹೆಸರುವಾಸಿಯಾಗಿದ್ದ ದಿ. ದೇವರಾಜ್ ಅರಸು ಅವರು ನಾಡಿನ ಸಮಸ್ತ ಜನರ ಅಭಿವೃದ್ಧಿಗಾಗಿ ಹಾಗೂ ಸಮಾನತೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನ ಜಾರಿಗೆ ತರುವ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರವಾಗಿ ಬದುಕಬೇಕು ಎಂಬ ಸಂದೇಶವನ್ನು ಸಾರಿದ್ದಾರೆ ಇವರ ತತ್ವ ಆದರ್ಶಗಳನ್ನ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕಾಗಿದೆ ಎಂದು ಸಚಿವ ಎನ್‌ಎಸ್ ಬೋಸರಾಜು ಹಾಗೂ ಸಂಸದ ಕುಮಾರ್ ನಾಯಕ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಯಣ್ಣ ಕೆ ಶಾಂತಪ್ಪ ನಗರ ಬ್ಲಾಕ್ ಅಧ್ಯಕ್ಷರಾದ ಬಸವರಾಜ ರೆಡ್ಡಿ, ರುದ್ರಪ್ಪ ಅಂಗಡಿ, ಬಸವರಾಜ್ ರೆಡ್ಡಿ, ಅಮರೇಗೌಡ ಹಂಚಿನಾಳ್,
ಜಿ ಶಿವಮೂರ್ತಿ, ಬಸವರಾಜ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು