ಡಿ. ದೇವರಾಜ ಅರಸು ಜನ್ಮದಿನಾಚರಣೆ
ಧಾರವಾಡ ,ಆ21: ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆಗಳನ್ನು ಒದಗಿಸಿದವರು, ಇವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ, ಲಕ್ಷಾಂತರ ವಿದ್ಯಾರ್ಥಿ ವಸತಿ ನಿಲಯಗಳನ್ನು ಕಟ್ಟಿಸಿಕೊಟ್ಟವರು ಇವರು, ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಇವರು ತಮ್ಮ ಆಧಿಕಾರದ ಸಂದರ್ಭದಲ್ಲಿ ಸಮಾಜದಲ್ಲಿದ್ದಂತಹ ಎಲ್ಲ ವರ್ಗದವರ ಪರವಾಗಿ ಶ್ರಮಿಸಿದರು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ದೇವರಾಜು ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ದೇವರಾಜು ಅರಸು ಅವರು ಕ್ರಾಂತಿಕಾರಿ ಹೋರಾಟಗಾರರಾಗಿದ್ದರು. ನಾವು ಮಾಡುತ್ತಿರುವಂತ ಕಾಯಕದ ಬಗ್ಗೆ ಕೀಳರಿಮೆ ಪಡಬಾರದು. ದೇವರಾಜು ಅರಸರ ಪ್ರತಿಯೊಂದು ತತ್ವ, ಆದರ್ಶಗಳನ್ನು ಪಾಲಿಸೋಣ, ಅವರ ಕೆಲವೊಂದು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಡಿ.ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಶಶಿಧರ ತೋಡಕರ ಮಾತನಾಡಿದರು. ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ ಎಸ್ ಅವರು ಡಿ.ದೇವರಾಜು ಅರಸು ಅವರ ಶೈಕ್ಷಣಿಕ ಜೀವನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಶಾಲ್, ನಾಮ ನಿರ್ದೇಶಿತ ಸದಸ್ಯ ಗುರುನಾಥ ಹುಲಗಾರ, ಅಲೆಮಾರಿ ಸಮುದಾಯದ ಮುಖಂಡ ರಾಜು ವೇಲಕರ, ಈಶ್ವರ ಬೆಳ್ಳಿಗಟ್ಟಿ ಇದ್ದರು. ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಗೋಪಾಲ ಲಮಾಣಿ ಅವರು ಅಥಿತಿಗಳ ಪರಿಚಯ ಮಾಡಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಗೀತಾ ಹೂಗಾರ ಅವರು ವಂದಿಸಿದರು.
