ಬ್ರಹ್ಮಶ್ರೀ ನಾರಾಯಣಗುರು ಜಯಂತಿ
ಧಾರವಾಡ,ಆ 21:ಕೇರಳ ರಾಜ್ಯದಲ್ಲಿ ಜಾತಿ, ಮತ ಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರು ಎಂಬ ಒಬ್ಬ ಸಮಾಜ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ತೆಗೆದುಹಾಕಲು ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಹೇಳಿದ ತತ್ವ ಜಗತ್ತಿನಲ್ಲಿ ಇರುವುದು ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ಸತ್ಯ ವಾಕ್ಯವನ್ನು ಪ್ರತಿಪಾದಿಸಿದ್ದರು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ಅವರು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾರಾಯಣಗುರು ಅವರು 1850 ರಂದು ಕೇರಳದಲ್ಲಿ ನಾರಾಯಣ ಗುರು ಅವರು ಜನಿಸಿದರು. ಇದೇ ಸಮಯದಲ್ಲಿ ಅಲ್ಲಿ ಜಾತಿ, ಧರ್ಮ, ಮೇಲು, ಕೀಳು ತಾರತಮ್ಯ ಹೆಚ್ಚು ಸಮಾಜದಲ್ಲಿ ಕಾಡುತಿತ್ತು, ನಾರಾಯಣ ಗುರುಗಳು ಜನ್ಮ ತಾಳಿ ಅಲ್ಲಿನ ಸಮಾಜದಲ್ಲಿ ಇದ್ದಂತಹ ಪಿಡಗನ್ನು ಕಿತ್ತೊಗೆಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ಢವಳಗಿ, ಹುಬ್ಬಳ್ಳಿ-ಧಾರವಾಡ ಹಿತವರ್ದಕ ಸಂಘದ ಅಧ್ಯಕ್ಷ ತಿಮ್ಮಪ್ಪ. ಡಿ ನಾಯ್ಕ, ಶಂಕರ ಕೋಟಿ, ಬಸವರಾಜ ಇಳಗೇರಿ, ಮಂಜುನಾಥ ಇಳಗೇರಿ ಇದ್ದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಕುಮಾರ ಬೇಕ್ಕೇರಿ ಅವರು ಸ್ವಾಗತಿಸಿದರು, ಆರತಿ ದೇವಶಿಕಾಮಣಿ ಅವರು ಕಾರ್ಯಕ್ರಮವನ್ನು ನೀರೂಪಿಸಿ, ವಂದಿಸಿದರು.