ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಲಿ.ಡ್ಯಾಂನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ:  ಅಪರಿಚಿತ ಮಹಿಳೆಯ ಶವವೊಂದು ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ  ಆ.೨೦ ರಂದು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
ಡ್ಯಾಂ ನ ೬ ನೇ ಗೇಟ್ ನ ಬಳಿ ಸುಮಾರು ೪೦-೫೫ ವರ್ಷದ ಅಪರಿಚಿತ  ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು ೧೫ ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಪೋಲೀಸರಿಗೆ ಮೇಲ್ನೋಟಕ್ಕೆ ಕಂಡುಬಂದಿದೆ. ಅಪರಿಚಿತ ಮಹಿಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನ್ನಪ್ಪಿರಬಹುದಾ? ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದಾ? ಎಂಬುದು ಅಸ್ಪಷ್ಟವಾಗಿದೆ. ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.