ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಬಂಟ್ವಾಳ : ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಅ.೨೦ ರಂದು ಮಂಗಳವಾರ ಮುಂಜಾನೆ ವೇಳೆ ನಡೆದಿದೆ.
ಕೋಕಲ ನಿವಾಸಿ ಸಾಯಿ ಶಾಂತಿ ಅವರ ಮಗ ಸುಮಂತ್ (೨೦) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮುಂಜಾನೆ ೫ ರ ಸುಮಾರಿಗೆ ಮನೆಯಲ್ಲಿ ಎಲ್ಲರು ಏಳುವ ಮುಂಚೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಣೆಯಲ್ಲಿ ಹುಡುಕಾಡಿದಾಗ ಈತ ತನ್ನ ಸಾವಿಗೆ ಕಾರಣವನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಉಜಿರೆ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು, ಕಾಲೇಜಿನಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಈತನ ತಾಯಿ ಶಕುಂತಲಾ ಅವರು ೨೦೧೩ ರಲ್ಲಿ ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ  ಹೆರಿಗೆ ವೇಳೆ ಸಾವನ್ನಪ್ಪಿದರು.  ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.