ಅರಸು,ರಾಜೀವ್ ಗಾಂಧಿ ಆಡಳಿತ ಕೆಳವರ್ಗಗಳ ಬಾಳಿಗೆ ಬೆಳಕು
ಕೋಲಾರ,ಆ,೨೧- ದೇಶದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಸಿಎಂ ದೇವರಾಜ ಅರಸು ಅವರು ತಳ ಸಮುದಾಯದ ಏಳಿಗೆಗೆ ಶ್ರಮಿಸಿ ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟು, ಕೆಳವರ್ಗದವರ ಬಾಳಿಗೆ ಬೆಳಕಾಗಿದ್ದಾರೆ ಅವರ ಆಡಳಿತ ದೇಶಕ್ಕೆ ಮಾದರಿಯಾಗಿದೆ ಎಂದು ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ ಈ ಇಬ್ಬರೂ ಮಹಾನ್ ವ್ಯಕ್ತಿಗಳು ಅಭಿವೃದ್ಧಿ ವಿಚಾರದಲ್ಲಿ ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡಿದ್ದಾರೆ ಯುವಕರು ಕೂಡ ರಾಜಕೀಯವಾಗಿ ಬೆಳೆಯುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಅಧಿಕಾರದ ವಿಕೇಂದ್ರೀಕರಣಕ್ಕೆ ಶಕ್ತಿ ತುಂಬಿ ಒಳ್ಳೆಯ ಜನಪ್ರಿಯ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಅಶೋಕ್‌ಕುಮರ್ ಮಾತನಾಡಿ, ಬೆಂಗಳೂರು ಅಭಿವೃದ್ಧಿಯ ದೂರದೃಷ್ಟಿಯ ಜೊತೆಗೆ ವಿಶೇಷವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ದುಡಿದ ಈ ಇಬ್ಬರೂ ಮಹಾನ್ ವ್ಯಕ್ತಿಗಳ ಜನ್ಮ ದಿನ ಎಂದು ಹೇಳಲು ಹೆಮ್ಮೆಯಾಗುತ್ತದೆ ಉಳುವವರನ್ನು ಹೊಲದೊಡೆಯರನ್ನಾಗಿ ಮಾಡಿದವರು ಅರಸು ಅದೇ ರೀತಿ ಮಾಹಿತಿ ತಂತ್ರಜ್ಞಾನದ ಹರಿಕಾರ ರಾಜೀವ್ ಗಾಂಧಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಲಿ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಖಾದ್ರಿಪುರ ಬಾಬು,ಒಬಿಸಿ ಮಂಜುನಾಥ್,ಗಂಗಮ್ಮನಪಾಳ್ಯ ರಾಮಯ್ಯ, ತ್ಯಾಗರಾಜ್, ತಮ್ಮಣ್ಣ ಮುಂತಾದವರಿದ್ದರು.