ವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ‌ ಪ್ರತಿಭಟನೆ
ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೨೦; ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ಖಂಡಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಸೇಷನ್(ಎಐಡಿವೈಓ), ಆಲ್ ಇಂಡಿಯಾ ಮಹಿಳಾ ಸಾಂಸ್ಕöÈತಿಕ ಸಂಘಟನೆ(ಎಐಎAಎಸ್ಸೆಸ್), ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಓ) ವತಿಯಿಂದ ನಗರದಲ್ಲಿ  ಜಂಟಿಯಾಗಿ ಪ್ರತಿಭಟನೆ ನಡೆಸಲಾಯಿತು.ನಗರದ ಡಾ.ಎಂ.ಸಿ.ಮೋದಿ ವೃತ್ತದಲ್ಲಿ ಜಮಾಯಿಸಿದ್ದ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಮಹಿಳೆಯರು, ವಿದ್ಯಾರ್ಥಿ-ಯುವಜನರು ಕೊಲ್ಕತ್ತಾದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಎಐಎಂಎಸ್ಸೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಕುಕ್ಕುವಾಡ ಮಾತನಾಡಿ, ಕೋಲ್ಕತ್ತಾದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ನೋಡಿದಾಗ ಈ ದೇಶದಲ್ಲಿ ಮಹಿಳೆಯರು ಸುರಕ್ಷಿತರಾಗಿದ್ದಾರೆಯೇ? ಎಂಬ ಪ್ರಶ್ನೆ ಮೂಡುತ್ತದೆ. ಮಹಿಳೆಯರನ್ನು ಅಮಾನುಶವಾಗಿ ನಡೆಸಿಕೊಳ್ಳುವುದು, ದೌರ್ಜನ್ಯ ಮಾಡುವುದು ಸಹಜ ಎಂಬAತೆ ಬಿಂಬಿಸಲಾಗುತ್ತಿದೆ. ಇದು ಅನಾಗರಿಕತೆ, ಕುಸಂಸ್ಕöÈತಿಯನ್ನು ಪ್ರತಿನಿಧಿಸುತ್ತದೆ. ಇದು ಇಡೀ ದೇಶಕ್ಕೆ, ಮನುಷತ್ವಕ್ಕೆ ಮಾಡಿದ ಅಪಮಾನ. ಇಂತಹ ಅನ್ಯಾಯದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಕಟ್ಟಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.ಎಐಡಿವೈಓ ಸಂಚಾಲಕ ಎಸ್.ಪರಶುರಾಮ್ ಮಾತನಾಡಿ, ಇಂತಹ ಘಟನೆಗಳಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ವೈದ್ಯೆಯ ಮೇಲೆ ನಡೆದ ದೌರ್ಜನ್ಯ, ಅತ್ಯಾಚಾರ, ಹತ್ಯೆ ಮಾನವೀಯ ಮೌಲ್ಯಗಳ ಸಾವು ಕಂಡಿರುವುದನ್ನು ತೋರಿಸುತ್ತದೆ. ಇಂತಹ ಅಪರಾಧಗಳನ್ನು ಸರ್ಕಾರ ತಡೆಗಟ್ಟಬೇಕು. ದೌರ್ಜನ್ಯಕಾರರಿಗೆ ನಿದರ್ಶನೀಯ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಎಐಎಂಎಸ್ಸೆಸ್ ಅಖಿಲ ಭಾರತ ಉಪಾಧ್ಯಕ್ಷೆ ಬಿ.ಆರ್.ಅಪರ್ಣ ಮಾತನಾಡಿ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಿಗೆ ಸಮಾಜದಲ್ಲಿ ಬೇರೂರಿರುವ ಪುರುಷ ಪ್ರಧಾನ ಮನೋಭಾವ ಕಾರಣ. ಇಂತಹ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗದಿರುವುದು ಸಹ ಪ್ರಮುಖ ಕಾರಣವಾಗಿದೆ. ಇಂದಿನ ಸಾಂಸ್ಕöÈತಿಕ ಅಧಃಪತನಕ್ಕೆ ಪ್ರೇರಣೆ ನೀಡುತ್ತಿರುವ ಅಶ್ಲೀಲತೆಗೆ ಸರ್ಕಾರ ಕಡಿವಾಣ ಹಾಕುತ್ತಿಲ್ಲ ಎಂದು ಆರೋಪಿಸಿದರು.ವೈದ್ಯಕೀಯ ಕ್ಷೇತ್ರದಲ್ಲಿ ಹಗಲಿರುಳು ದುಡಿಯುವ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆ ಹೀನಾಯವಾದದ್ದು. ಪ್ರಸ್ತುತ ವ್ಯವಸ್ಥೆಯೇ ಇದಕ್ಕೆ ಕಾರಣವಾಗಿದೆ. ಈ ಘಟನೆಯು ಇಡೀ ವೈದ್ಯಕೀಯ ಲೋಕವನ್ನು ತಲ್ಲಣಗೊಳಿಸಿದೆ. ಇದನ್ನು ವಿರೋಧಿಸಿ ದೇಶವಾಪಿ ಹೋರಾಟಗಳು ನಡೆಯುತ್ತಿದ್ದು, ಸರ್ಕಾರ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.