ಹೊನ್ನಾಳಿಯಲ್ಲಿ ಬೋನಿಗೆ ಬಿದ್ದ ಚಿರತೆ
ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೨೦; ಜಮೀನೊಂದರಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ ದಾವಣಗರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ನಡೆದಿದೆ. ಮಾಸಡಿ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದು ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಿಂದ ಕಳೆದ ಮೂರು ದಿನಗಳಿಂದ  ಮಾಸಡಿ ಗ್ರಾಮದ ಚೌಡಮ್ಮ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇಟ್ಟಿದ್ದು, ಇಂದು ಬೆಳಗ್ಗೆ ಚಿರತೆ ಬೋನಿಗೆ ಬಿದಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.