ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ
ಕಲಬುರಗಿ,ಆ.20-ನೇಣು ಹಾಕಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲಾಲಬಾದ್ ಬಡಾವಣೆಯಲ್ಲಿ ನಡೆದಿದೆ.
ಅಲ್ಲಾಭಕ್ಷ ತಂದೆ ನಬಿಸಾಬ್ (26) ಆತ್ಮಹತ್ಯೆಗೆ ಶರಣಾದ ಯುವಕ.
ಅಲ್ಲಾಭಕ್ಷ ಮದುವೆಯಾಗಿತ್ತು. ಎರಡು ವರ್ಷಗಳ ಹಿಂದೆ ವಿವಾಹ ವಿಚ್ಛೇದನವಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.