ಗೂಡಂಗಡಿಗಳ ತೆರವು ಕಾರ್ಯಾಚರಣೆ
ಕೊಲ್ಹಾರ:ಅ.೨:ಪಟ್ಟಣದ ಯುಕೆಪಿ ಕ್ರಾಸ್ ನಲ್ಲಿ ರಸ್ತೆ ಹಾಗೂ ಫುಟ್ ಪಾತ್ ಗಳ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪ.ಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ ಮಾತನಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ವ್ಯಾಪಾರಸ್ಥರು ರಸ್ತೆ ಹಾಗೂ ಪುಟ್ ಪಾತ್ ಗಳನ್ನು ಆಕ್ರಮಿಸಿಕೊಂಡಿರುವ ಕಾರಣ ವಾಹನಗಳ ನಿಲುಗಡೆಗೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗೂಡಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನಕೂಲ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.