ರಕ್ತದಾನದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸಗಳು ಮಾಡಬೇಕು:ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
ಕಲಬುರಗಿ:ಅ.1: ರಕ್ತದಾನದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಜಿಲ್ಲೆಯ ಅನೇಕ ಅಭಿಯಾನಗಳಿವೆ ಸೇವಾ ಸಂಘಗಳು ಇವೆ ಆದರೂ ನಾವೂ ಎರಡು ಮೂರು ಹೆಜ್ಜೆ ಮುಂದೆ ಹೋಗುವ ಅಗತ್ಯ ಇದೆ. ಒಂದು ಜೀವ ಉಳಿಸುವ ರೀತಿಯಲ್ಲಿ ನಾವು ಕಾರ್ಯ ಮಾಡಬೇಕು. ಜಿಲ್ಲಾಧಿಕಾರಿಗಳು ಬಿ ಘೌಜಿಯಾ ತರನ್ನುಮ್ ಅವರು ಹೇಳಿದರು.
ಮಂಗಳವಾರದಂದು ಹಳೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆಸ್ಪತ್ರೆ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ,ಬೆಂಗಳೂರು,ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್,ಬೆಂಗಳೂರು,ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಕಲಬುರಗಿ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ,ಜಿಲ್ಲೆ ರಕ್ತ ನಿಧಿ ಕೇಂದ್ರಗಳು ರೆಡ್ ರಿಬ್ಬನ್ ಕ್ಲಬಗಳು, ಸ್ವಯಂ ಸೇವಾ ಸಂಸ್ಥೆಗಳು,ಎನ್. ಎಸ್. ಎಸ್. ಘಟಕ. ಕಲಬುರಗಿ ಇವರಗಳ ಸಂಯುಕ್ತಶ್ರಾಯದಲ್ಲಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿಗಳು ಡಾ|| ಮಮತಾ ಪಾಟೀಲ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಅರ್ಹ ವ್ಯಕ್ತಿಗಳು ರಕ್ತಧಾನ ಮಾಡಬೇಕು ರಕ್ತದಾನ ಮಾಡುವದರಿಂದ ನಮ್ಮ ಆರೋಗ್ಯದ ದೃಷ್ಟಿಯಿಂದ ಕೂಡ ಒಳ್ಳೆಯದಾಗಿದೆ.ರಕ್ತದಾನ ಮಾಡುವುದು ಇನ್ನೊಬರ ಜೀವ ಉಳಿಸುವಂತ ಒಂದು ಪುಣ್ಯದ ಕೆಲಸವಾಗಿದೆ.ಹಾಗಾಗಿ ರಕ್ತದಾನ ಮಾಡಲು ಹೆಚ್ಚಿನ ಜನರು ಕಾಳಜಿವಹಿಸಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಾ|| ಶರಣಬಸಪ್ಪಾ ಕ್ಯಾತನಾಳ ಅಧ್ಯಕ್ಷತೆ ವಹಿಸಿ ಮಾತನಾಡಿ ಆರೋಗ್ಯ ತಪಾಸಣೆ ಮಾಡಿಕೊಂಡು ಸಲಹೆ ಸೂಚನೆಗಳನ್ನು ಪಡೆದುಕೊಂಡು ರಕ್ತದಾನ ಮಾಡಬಹುದಾಗಿದೆ ಎಂದರು.