ಅಣ್ಣ-ತಂಗಿಯರ ನಡುವೆ ವಾತ್ಸಲ್ಯ ಬೆಳೆಸುವ ಹಬ್ಬವೇ ರಕ್ಷಾ ಬಂಧನ
ಭಾಲ್ಕಿ:ಆ.20:ಭಾರತೀಯ ಸಂಸ್ಕøತಿಯಲ್ಲಿ ರಕ್ಷಾ ಬಂಧನಕ್ಕೆ ವಿಶೇಷ ಮಹತ್ವವಿದೆ. ಇದು ಅಣ್ಣ-ತಂಗಿಯರ ನಡುವೆ ವಾತ್ಸಲ್ಯ ಬೆಳೆಸುವ ಹಬ್ಬವಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಸೋಮವಾರ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಹೋದರರಿಂದ ರಕ್ಷಣೆ ಬಯಸಿ ಹೆಣ್ಣು ಮಕ್ಕಳು ರಾಖಿ ಕಟ್ಟುತ್ತಾರೆ. ಅಕ್ಕ ತಂಗಿಯರಿಗೆ ರಕ್ಷಣೆ ಕೊಡುವ ಸಹೋದರರಿಗೆ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದು ತಿಳಿಸಿದರು.
ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ.
ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕು ಎಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ ಎಂದು ಹೇಳಿದರು.
ಎಸ್‍ಪಿಗೆ ರಾಖಿ ಕಟ್ಟಿದ ಗುರುಕುಲ ವಿದ್ಯಾರ್ಥಿಗಳು
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ವಿದ್ಯಾರ್ಥಿಗಳು ರಕ್ಷಾ ಬಂಧನ ನಿಮಿತ್ತ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರನ್ನು ರಾಖಿ ಕಟ್ಟಿ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿದರು.
ಬೀದರ್ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಸೋಮವಾರ ವಿದ್ಯಾರ್ಥಿಗಳು ಭೇಟಿ ನೀಡಿ ಎಸ್ಪಿ ಪ್ರದೀಪ ಗುಂಟಿ ಅವರನ್ನು ರಾಖಿ ಕಟ್ಟಿ, ಸಿಹಿ ತಿನ್ನಿಸಿ ಬಸವಣ್ಣವರ, ಪೂಜ್ಯರ ಭಾವಚಿತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದತ್ತು ಕೇಂದ್ರದ ಮೇಲ್ವಿಚಾರಕಿ ಮಹಾಲಕ್ಷ್ಮಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ದೇಶದ ಗಡಿಯಲ್ಲಿ ನಮ್ಮ ಸೈನಿಕರು ದೇಶ ಕಾಯುತ್ತಾರೆ. ಪೆÇಲೀಸರು ಸಮಾಜದೊಳಗಿನ ದುಷ್ಟ ಶಕ್ತಿಗಳ ನಿಯಂತ್ರಿಸಿ ಶಾಂತಿ ನೆಲೆಸಲು ಶ್ರಮಿಸುತ್ತಾರೆ. ಅಂತವರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಕ್ಷಾ ಬಂಧನದ ನಿಮಿತ್ತ ನಮ್ಮ ಗುರುಕುಲದ ವಿದ್ಯಾರ್ಥಿಗಳು ಪೆÇಲೀಸರಿಗೆ ರಾಖಿ ಕಟ್ಟಿರುವುದು ಖುಷಿ ತಂದು ಕೊಟ್ಟಿದೆ.