ರಾಜ್ಯ ಕಂಡ ಶ್ರೇಷ್ಠ ಸಾಮಾಜ ಸುಧಾರಕ ಡಿ.ದೇವರಾಜ ಅರಸು
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದಲ್ಲಿ ಜನನಾಯಕ, ಬಡವರ ಧ್ವನಿ, ‘ಹಿಂದುಳಿದ ವರ್ಗಗಳ ಹರಿಕಾರ’ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ಅವರ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾಯ ಡಾ.ಮೋಹನರಾಜ ಅವರು ಮಾತನಾಡುತ್ತ, ಡಿ.ದೇವರಾಜ ಅರಸು ಅವರು ರಾಜ್ಯ ಕಂಡ ಶ್ರೇಷ್ಠ ಸಾಮಾಜಿಕ ಸುಧಾರಕರು. ಸತತ ಹತ್ತು ವರ್ಷ ಶಾಸಕರಾಗಿ ಆಯ್ಕೆಯಾಗಿದ್ದ ಅರಸ್ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವರ ಅಧಿಕಾರವಧಿಯಲ್ಲಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದರು. “ಬಡತನ ನಿರ್ಮೂಲನೆ” ಅವರ ಮೊದಲ ಆದ್ಯತೆ. ರಾಜ್ಯದಲ್ಲಿ ಸುಧಾರಣೆ ತರಲು ಶೈಕ್ಷಣಿಕ ಹಾಗೂ ತಂತ್ರಜ್ಞಾನ ಹೊಂದಿದ ಮಂತ್ರಿಮAಡಲವನ್ನು ರಚಿಸಿದರು. ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ನಯನತಾರ ಆಸ್ಪಲ್ಲಿ, ರಶ್ಮಿ, ಮತ್ತು ಕಛೇರಿ ಸಿಬ್ಬಂದಿಗಳಾದ ಜ್ಯೋತಿ ಕಲ್ಲೂರ, ಸುಚೇತಾ ಜೋಗುರು, ಶರಣಮ್ಮ ಎನ್, ಜಯಶ್ರಿ, ಭಾಗ್ಯವತಿ, ಅಂಬಿಕಾ, ಸುನೀತಾ ಸ್ವಾಮಿ, ಸಿದ್ದಲಿಂಗಯ್ಯ ಹೊಸಮನಿ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.