ರಿಕ್ಷಾ-ಬೈಕ್ ಅಪಘಾತ: ಬೈಕ್ ಸವಾರನಿಗೆ ಗಂಭೀರ
ಸುಳ್ಯ:ಐವರ್ನಾಡಿನ ಬಾಂಜಿಕೋಡಿಯಲ್ಲಿ ರಿಕ್ಷಾ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಐವರ್ನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಜಟ್ಟಿಪಳ್ಳದ ಯುವಕನ ಬೈಕಿಗೆ ಸುಳ್ಯ ಕಡೆಯಿಂದ ಐವರ್ನಾಡು ಕಡೆಗೆ ಹೋಗುತ್ತಿದ್ದ ಮೇಘನಾ ಫಾರ್ಮ್‌ನ ರಿಕ್ಷಾ ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಕೈ ಕಾಲಿಗೆ ಗಂಭೀರ ಗಾಯಗೊಂಡಿದ್ದು ಅವರನ್ನು ಸುಳ್ಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿದೆ. ಬೆಳ್ಳಾರೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.