ಕಾರು ಲಾರಿ ಮಧ್ಯೆ ಅಪಘಾತ – ಪ್ರಯಾಣಿಕರಿಗೆ ಗಾಯ
ಸುಳ್ಯ:ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಿಂದ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಲಾರಿಗೆ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಕಲ್ಲುಗುಂಡಿ ನವಮಿ ಸ್ಟೋರ್ ಮುಂಭಾಗದ ಮುಖ್ಯರಸ್ತೆಯಲ್ಲಿ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯರು ಸೇರಿ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.