ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.20-ಕೊಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದಿರುವಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರುಅಲ್ಲಿಂದ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಪಶ್ಚಿಮ ಬಂಗಾಳ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ತಿಂಗಳಿಂದಲೂ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು ಮಹಿಳೆಯರಿಗೆ ರಕ್ಷಣೆಇಲ್ಲದಂತಾಗಿದೆ. ಆದರೆ, ಈ ಸಂಬಂಧಅಲ್ಲಿನ ಮಮತಾ ಬ್ಯಾನರ್ಜಿಅವರ ಆಡಳಿತದ ಸರಕಾರಯಾವುದೇಕ್ರಮ ವಹಿಸದೇ ನಿರ್ಲಕ್ಷ್ಯಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವಇಂತಹ ಘಟನೆಗಳು ನಾಚಿಕೆಗೇಡಿನ ಸಂಗತಿಯಾಗಿದೆ. ಆದ್ದರಿಂದಕೂಡಲೇ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆತರಬೇಕುಎಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಹೆಚ್ಚುವರಿಜಿಲ್ಲಾಧಿಕಾರಿಗೀತಾ ಹುಡೇದಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ಸಂಚಾಲಕ ಎಂ.ಎನ್.ವಿಶ್ವಾಸ್‍ಗೌಡ, ನಗರ ಕಾರ್ಯದರ್ಶಿ ರಂಜಿತಾ, ಸಿ.ಪಿ. ಗಗನ್, ಅಂಕಿತ್, ಚಂದನ್, ಪುನೀತ್, ಬಸವರಾಜೇಂದ್ರ ಸೇರಿದಂತೆಇತರರು ಭಾಗವಹಿಸಿದ್ದರು