ಸಿಎಂ ರಾಜೀನಾಮೆಗೆ ಮರತೂರಕರ್ ಒತ್ತಾಯ
ಕಲಬುರಗಿ:ಆ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ,ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯ ನವರೇ ಮೊಂಡತನ ಬಿಟ್ಟು ರಾಜೀನಾಮೆ ನೀಡಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಒತ್ತಾಯಿಸಿದ್ದಾರೆ.
ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯಮಂತ್ರಿಗಳು ತನಿಖೆ ಎದುರಿಸಬೇಕು ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕಮಿಷನ್ ದಂಧೆ ಹಾಗೂ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಈ ಕೂಡಲೇ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತನಿಖೆ ಎದುರಿಸಿ ಕಾನೂನಿಗೆ ಗೌರವ ನೀಡಬೇಕು ಎಂದು ಅವರು ತಿಳಿಸಿದ್ದಾರೆ.