ಅತ್ಯಾಚಾರ: ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿ
ಚಿಂಚೋಳಿ,ಅ.1-ಹದಿನೇಳು ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿ ಮೇಲೆ ಅದೇ ವಯಸ್ಸಿನ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿದ್ದು, ಇದರಿಂದ ಮನನೊಂದು ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದಳು ಎನ್ನಲಾಗಿದೆ. ತನ್ನ ಮೇಲೆ ನಡೆದ ಅತ್ಯಾಚಾರದಿಂದ ಮನನೊಂದ ಬಾಲಕಿ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆರೋಪಿ ಬಾಲಕನನ್ನು ಚಿಂಚೋಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಆತನ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು 306 ಅಡಿಯಲ್ಲಿ (ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ) ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.