ಉತ್ತಮ ಶಿಕ್ಷಕಿ, ಶಿಕ್ಷಕ ಪ್ರಶಸ್ತಿ ಪ್ರದಾನ
ಕಲಬುರಗಿ.ಅ.1:ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಉತ್ತರ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಎಂಟು ಜನ ಶಿಕ್ಷಕರಿಗೆ ಉತ್ತಮ ಶಿಕ್ಷಕಿ, ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಲಬುರಗಿ ನಗರದ ಅಳಂದ ರಿಂಗ್ ರಸ್ತೆಯಲ್ಲಿರುವ ಮಂದಾರಪುಷ್ಪ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಪಾತಿಮಾ ಹಾಗೂ ಎಂಎಲ್‍ಸಿ ಶಶೀಲ್ ನಮೋಶಿ ಅವರು ಉದ್ಘಾಟಿಸಿದರು.ಕಳೆದ 12 ವರ್ಷಗಳಿಂದ ಶ್ರೀ ಹಿಂಗುಲಾಂಬಿಕಾ ಅನುದಾನಿತ ಪ್ರೌಢ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸಂತೋಷಿಮಾ ಸಾತಿಹಾಳ್ ಇವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮ ದಲ್ಲಿ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಹಂಚನಾಳ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಸೈಯದ್ ಅಹ್ಮದ ಅಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.