ರಾಜ್ಯಪಾಲರ  ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ;  ಸಿದ್ದಿಗಿ‌ ಮೆರವಣಿಗೆ -ಆಕ್ರೋಶ
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೧೯; ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನಡೆ ಎಂದು ಆರೋಪಿಸಿ  ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಪಾಲರ ಸಿದ್ದಿಗಿ ಮೆರವಣಿಗೆಯ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಿದ್ದಿಗಿ ಬಳಿ‌ಬಾಯಿ ಬಡಿದುಕೊಂಡು‌ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ದೂರಿದರು. ಅಂಬೇಡ್ಕರ್ ಸರ್ಕಲ್‍ನಲ್ಲಿಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಜಯದೇವ ವೃತ್ತ ನಂತರ ಮಹಾತ್ಮಗಾಂಧಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಪ್ರಾಸಿಕ್ಯೂಷನ್ ರದ್ಧುಪಡಿಸಬೇಕು. ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಕೆ.ಎಸ್. ಬಸವಂತಪ್ಪ, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ,ಮುಖಂಡರಾದ ಎಸ್.ಮಲ್ಲಿಕಾರ್ಜುನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ ಹದಡಿ, ಬಿ.ಕೆ.ಪರಶುರಾಮ್ ಮಾಗಾನಹಳ್ಳಿ,  ಪಕ್ಷದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ದಾವಣಗೆರೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಎಪಿಎಂಸಿ ಮಾಜಿ ಸದಸ್ಯರು, ಗ್ರಾಮ ಪಂಚಾಯತಿಯ ಹಾಲಿ ಮತ್ತು ಮಾಜಿ ಸದಸ್ಯರು, ದಾವಣಗೆರೆ ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರು, ಡಿಸಿಸಿ ಬ್ಯಾಂಕ್ ಸದಸ್ಯರು,  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.