ದೇವರಾಜು ಅರಸು ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.19- ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕುಮಾರ್ ಹಸಿರು ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ದೆಯನ್ನು ಎರ್ಪಡಿಸಲಾಗಿದೆ, ಇದರಲ್ಲಿ 100, 200ಮೀಟರ್ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ದೆಗಳನ್ನು ನಡೆಸಲಾಗುತ್ತಿದ್ದು, ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ನಿಲಯಪಾಲಕರಾದ ಲಿಂಗಣ್ಣ, ಎಚ್.ಬಿ.ಸ್ವಾಮಿ, ಅಶ್ವಥ್ ಮಂಜುನಾಥ್, ಚಿನ್ನಸ್ವಾಮಿ, ಯುವ ಸ್ಪಂದನಾ ಕೇಂದ್ರದ ಗುರುರಾಜ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.