ಫಲಿತಾಂಶ ಸುಧಾರಣೆ: ಕಾರ್ಯಾಗಾರ
ಧಾರವಾಡ,ಆ18: ಎಸ್.ಎಸ್.ಎಲ್.ಸಿ ಪರೀಕ್ಷೆ ಮಕ್ಕಳ ವಿದ್ಯಾರ್ಥಿ ಜೀವನ ಮುಖ್ಯ ಘಟ್ಟ ಕಳೆದ ಸಾಲಿನ ಪರೀಕ್ಷಾ ಫಲಿತಾಂಶ ಅತೀ ಕಡಿಮೆ ಆಗಿದ್ದು, ಶೇ. 74.85 ಫಲಿತಾಂಶ ಬಂದಿದೆ. ಇದನ್ನು ಸುಧಾರಿಸಿ ಶೇ. 100 ರಷ್ಟು ಮಾಡುವಲ್ಲಿ ವಿದ್ಯಾರ್ಥಿಗಳ ಪಾಲಕರ ಮತ್ತು ಶಾಲಾ ಮುಖ್ಯಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಮಿಷನ್ ವಿದ್ಯಾಕಾಶಿ ಯೋಜನೆ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಇತರ ಇಲಾಖೆಯ ನೊಡಲ್ ನೇಮಕ: ಜಿಲ್ಲೆಯ ಪ್ರತಿ ಪ್ರೌಢಶಾಲೆಗೆ ಮಿಷನ್ ಯೋಜನೆಯಡಿ ನೀಡಿರುವ ಕಾರ್ಯಗಳು ನಿಯಮಿತವಾಗಿ ನಡೆಯುವಂತೆ ನಿಗಾವಹಿಸಲು ಮತ್ತು ಶಾಲೆಗೆ ಸಹಕಾರ ನೀಡಲು ಬೇರೆ ಇಲಾಖೆಯ ಒರ್ವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಶಾಲಾ ನೊಡಲ್ ಎಂದು ನೇಮಕ ಮಾಡಲಾಗುತ್ತದೆ. ಪ್ರತಿ 15 ದಿನಕೊಮ್ಮೆ ನೊಡಲ್ ಅಧಿಕಾರಿಯಿಂದ ಶಾಲಾ ಶೈಕ್ಷಣಿಕ ಸುಧಾರಣೆ, ಮಕ್ಕಳ ಹಾಜರಾತಿ ಕುರಿತು ನೇರವಾಗಿ ವರದಿ ಪಡೆಯಲಾಗುತ್ತದೆ. ಪ್ರತಿಯೊಬ್ಬ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಈ ಕಾರ್ಯದಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.