ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
ನವಲಗುಂದ ,ಆ18 : ಕೊಲ್ಕತಾದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಿ ಕೈಗೆ ಕಪ್ಪು ಪಟ್ಟಿ ಧರಿಸಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ಅತ್ಯಾಚಾರಕ್ಕೊಳಗಾದ ವೈದ್ಯಕೀಯ ಸಿಬ್ಬಂದಿ ಸಾವಿಗೆ ನ್ಯಾಯ ಒದಗಿಸಬೇಕು ಹಾಗೂ ಅತ್ಯಾಚಾರ ಮಾಡಿ, ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಘೋಷಣೆ ಕೂಗಿ ಒತ್ತಾಯಿಸಿದರು.
ನಗರದ ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಲಾಗಿದ್ದು, ವೈದ್ಯಕೀಯ ಸಿಬ್ಬಂದಿಗಳು ಧಾರವಾಡ ಜಿಲ್ಲಾ ಆಸ್ಪತ್ರೆ ಮುಂದೆ ನಡೆಯುವ ಪ್ರತಿಭಟನೆಗೆ ತೆರಳಿದ್ದರು.
ಕೇಸರಿ ದೇಸಾಯಿ,ವಿಜಯಲಷ್ಮಿ ಸುಲ್ತಾನಪುರ, ಶಿವಪ್ಪ ಧನಕ,ರೇಖಾ ಚೋಗರಿ,ಲಿಂಗರಾಜ್ ಬಂಡಿ, ಮಲ್ಲಯ್ಯ ಹೊನ್ನುರ್ಮತ್ ಎಸ್ ಎನ್ ಶಿದ್ದರಾಮಶೆಟ್ಟರ, ಗಿರಿಜಾ ಪಾಟೀಲ್ ಮಂಜುನಾಥ್ ಹಳ್ಳಿ ಸೇರಿದಂತೆ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು.