ಜಿಲ್ಲಾ ಮಟ್ಟಕ್ಕೆ ಆಯ್ಕೆ
(ಸಂಜೆವಾಣಿ ವಾರ್ತೆ )
ಔರಾದ,ಆ ೧೮: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಬೀದರ ಹಾಗೂ ಪತ್ರಿಸ್ವಾಮಿ ಪದವಿ ಪೂರ್ವ ಕಾಲೇಜು ಔರಾದ(ಬಿ) ಸಂಯುಕ್ತಾಶ್ರಯದಲ್ಲಿ ಆ.೧೬- ೧೭ ರಂದು ನಡೆದ ಔರಾದ(ಬಿ) ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೨೦೨೪-೨೫ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮರೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಆರ್.ಪಿ ಮಠ, ಉಪನ್ಯಾಸಕರಾದ ಡಿ.ಡಿ ಬೊಳೆಗಾವೆ, ಧನರಾಜ ಬಲ್ಲೂರ, ಲೊಕೇಶ, ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದರು.