ದೇಶದ ಆರ್ಥಿಕ ಬೆಳೆವಣಿಗೆಯಲ್ಲಿ ಯುವ ಸಮುದಾಯದ ಪಾತ್ರ ಬಹುಮುಖ್ಯ : ವಿನಯ ಅಸುಂಡೆ
ಅಥಣಿ :ಅ.1: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದ್ದು ಕೌಶಲ್ಯ ಮತ್ತು ತಂತ್ರಜ್ಞಾನದಲ್ಲೂ ಮುಂದಿರುವ ಯುವ ಸಮುದಾಯ ದೇಶದ ಆರ್ಥಿಕತೆ ಬೆಳೆವಣಿಗೆಗೆ ಮುಖ್ಯ ಪಾತ್ರ ವಹಿಸುತ್ತಿದೆ ಎಂದು ಬೆಳಗಾವಿಯ ಖ್ಯಾತ ಲೆಕ್ಕ ಪರಿಶೋಧಕ ವಿನಯ ಅಸುಂಡೆ ಹೇಳಿದರು.
ಅವರು ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ” ಸಿಎ ಫೌಂಡೇಶನ್ ನ ಒಳನೋಟ “ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳುವುದರ ಜೊತೆಗೆ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿದರೆ ಜನರ ಜೀವನ ಮಟ್ಟ ಉತ್ತಮಗೊಳ್ಳುತ್ತದೆ. ಪ್ರತಿಯೊಬ್ಬರಿಗೆ ಪೌಷ್ಟಿಕ ಆಹಾರ, ಉತ್ತಮ ಪರಿಸರ ಹಾಗೂ ಗುಣ ಮಟ್ಟದ ಶಿಕ್ಷಣ ನೀಡುವುದು ಸರಕಾರದ ಆರ್ಥಿಕ ಪರಿಸ್ಥಿತಿಯು ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಈ ಸಾಧ್ಯ.
ಈ ವೇಳೆ ಜೆಎ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಪಿ.ಮೇತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಗುಣಮಟ್ಟ ಶಿಕ್ಷಣ ಪಡೆಯಬೇಕು ಎಂಬುದು ಮಹಾವಿದ್ಯಾಲಯದ ಪ್ರಮುಖ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಬೇರೆ ಬೇರೆ ವಿಭಾಗಗಳಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು.
ಭಾರತಿ ಅಡಹಳ್ಳಿ ಕಾರ್ಯಕ್ರಮ ನಿರೂಪಿಸಿದರು.ಸುರೇಶ ದಾಸರಡ್ಡಿ, ಶಂಕರ ಕಮತಗಿ, ರಮೇಶ ಮಾಳಿ, ಅನಿಲ ಅಂಕಲಗಿ, ಪೂಜಾ ಭಂಗಿ, ಆಶಾ ಹೀರೇಮಠ ಮೊದಲಾದ ಉಪನ್ಯಾಸಕರು ಕಾರ್ಯಾಗಾರದಲ್ಲಿ ಹಾಜರಿದ್ದರು