ಆ.19 ವಚನಕಾರ ಸುಲಿಯ ಚಂದ್ರಯ್ಯ ಜಯಂತಿ
ಕೋಲಾರ,ಆ.೧೮- ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಪುರುಷ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಅಣ್ಣ ಬಸವಣ್ಣನವರ ಅನುಯಾಯಿಗಳಾದ, ವಚನಕಾರ ಶ್ರೀ ನುಲಿಯ ಚಂದಯ್ಯ ನವರ ಜಯಂತಿಯನ್ನು ನಗರದ ಟಿ. ಚೆನ್ನಯ್ಯ ರಂಗಮಂದಿರದಲ್ಲಿ ಆಗಸ್ಟ್ ೧೯ ರಂದು ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊರಚ ಕೊರಮ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು.
ಕೋಲಾರ ಜಿಲ್ಲೆಯ ಎಲ್ಲಾ ಕುಲಬಾಂಧವರು ಇದನ್ನೇ ಆಹ್ವಾನ ಎಂದು ಸ್ವೀಕರಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ವಿ ಆರ್ ಶಂಕರಪ್ಪ ಮತ್ತು ಕಾರ್ಯದರ್ಶಿ ರಮೇಶ್ ಬಾಬು ಮನವಿ ಮಾಡಿದ್ದಾರೆ.
