ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸಲು ಕೇಂದ್ರ ಸಂಚು: ಪ್ರಿಯಾಂಕ್ ಖರ್ಗೆ
ಕಲಬುರಗಿ,ಆ.೧೭-ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಕರ್ನಾಟಕ ರಾಜ್ಯಪಾಲರ ನಿರ್ಧಾರ ಮಾಡಿದ್ದು, ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರ ನಡೆಸಿರುವ ಸಂಚು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್ ಆಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ನಾಯಕರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ತನ್ನ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಆದರೆ ನಮ್ಮ ಪರವಾಗಿರುವ ಸಂವಿಧಾನದೊAದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.