ಕರಾಟೆ, ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನ
ಸಂಜೆವಾಣಿ ವಾರ್ತೆ
ದಾವಣಗೆರೆ: ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆ ಮತ್ತು ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕಗಳು ದಾವಣಗೆರೆ ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗಣೇಶ್ ಜಕಣಾಚಾ‌ರ್ ಹಾಗೂ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದ ರಾಷ್ಟ್ರೀಯ ಪವ‌ರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಎನ್. ಮಂಜುನಾಥ್ ಮತ್ತು ಹೆಚ್. ಪವನ್ ಇವರುಗಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ ಎಂದು ನಗರದ ಶ್ರೀ ಸಾಯಿ ಜಿಮ್ ತರಬೇತುದಾರ ಕೆ.ಎಸ್. ಸಾಯಿನಾಥ್‌ ತಿಳಿಸಿದ್ದಾರೆ.