ನಗರದೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬ ಆಚರಣೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.17:- ಶ್ರಾವಣ ಮಾಸದ ಮೊದಲ ಹಬ್ಬವಾದ ವರಮಹಾಲಕ್ಷ್ಮೀ ಹಬ್ಬವನ್ನು ಮೈಸೂರಿನಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸಲ್ಪಡುವ ವರಮಹಾಲಕ್ಷ್ಮಿ ಹಬ್ಬವನ್ನು ಮೈಸೂರಿನಲ್ಲಿ ವಿಶೇಷವಾಗಿ ಆಚರಿಸಲಾಯಿತು. ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ತಮ್ಮ ಶಕ್ತ್ಯಾನುಸಾರು ಆಚರಣೆ ಮಾಡಿ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಂಡರು. ಮಹಿಳೆಯರ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬದಂದು ಹೆಂಗಳೆಯರು ಮನೆಯನ್ನು ಸ್ವಚ್ಛಗೊಳಿಸಿ ದೇವರ ಮನೆ ಅಥವಾ ಮನೆಯ ಆವರಣದಲ್ಲಿ ಅಷ್ಟಲಕ್ಷ್ಮಿಯರನ್ನು ಪೂಜಿಸಿ ಸುಖ, ಶಾಂತಿ, ನೆಮ್ಮದಿ, ಧನ ಸಂಪತ್ತಿಗಾಗಿ ಪ್ರಾರ್ಥಿಸಿದರು. ಮನೆಯಲ್ಲಿ ಕಳಸ ಪ್ರತಿಷ್ಠಾಪನೆ ಮಾಡಿ, ಅದಕ್ಕೆ ಲಕ್ಷ್ಮಿಯ ಮುಖವಾಡ, ಸೀರೆ, ಬಳೆ ತೊಡಿಸಿ, ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಿ, ವಿವಿಧ ತಿನಿಸುಗಳು, ಹಣ್ಣಗಳನ್ನು ನೈವೇದ್ಯಕ್ಕಿಟ್ಟು, ಮನೆಯಲ್ಲಿರುವ ಹಣ, ಚಿನ್ನದೊಡವೆಗಳನ್ನು ದೇವರ ಮುಂದಿಟ್ಟು ನಮ್ಮ ಮನೆಯಲ್ಲಿ ಸದಾ ನೆಲೆಸಿರುವಂತೆ ಪ್ರಾರ್ಥಿಸಿದರು. ಬಳಿಕ ತಮ್ಮ ಅಕ್ಕಪಕ್ಕದ ಮನೆಯ ಮುತ್ತೈದೆಯರನ್ನು ಮನೆಗೆ ಕರೆದು ಅವರಿಗೆ ಅರಿಶಿನ, ಕುಂಕುಮ, ಫಲತಾಂಬೂಲ ನೀಡಿದರು. ಇಂತಹ ದೃಶ್ಯಗಳು ನಗರದ ಎಲ್ಲೆಡೆ ಸಾಮಾನ್ಯವಾಗಿತ್ತು. ಕೆಲವರು ಸರಳವಾಗಿ ಆಚರಿಸಿದರೆ, ಇನ್ನು ಕೆಲವರು ಅದ್ದೂರಿಯಾಗಿ ಆಚರಿಸಿದರು.
ಇದಲ್ಲದೆ ತಾಯಂದಿರು ಮಗಳಿಗೆ ಬಾಗಿನ ಕೊಟ್ಟು ಹರಸಿದರು. ಹಬ್ಬದ ಹಿನ್ನೆಲೆಯಲ್ಲಿ ಕಡುಬು, ಹೋಳಿಗೆ, ಸಜ್ಜಿಗೆ, ಕೋಸುಂಬರಿ, ವಡೆ, ಪೆÇಂಗಲï, ಚಕ್ಕುಲಿ ಸೇರಿದಂತೆ ಇತರೆ ತಿನಿಸಗಳನ್ನು ಮಾಡಿ ಸವಿದರು. ಹೂವು, ಹಣ್ಣುಗಳ ಬೆಲೆ ಏರಿಕೆಯಾಗಿದ್ದರೂ ತಲೆಕೆಡಿಸಿಕೊಳ್ಳದ ಮಹಿಳೆಯರು ತಮ್ಮ ತಮ್ಮ ಮನೆಗಳಲ್ಲಿ ಹಬ್ಬವನ್ನು ಆಚರಿಸಿದರು.
ದೇವಸ್ಥಾನಗಳಲ್ಲಿ ಆಚರಣೆ:
ವರಮಹಾಲಕ್ಷ್ಮೀ ಹಬ್ಬವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರು ಮನೆಯಲ್ಲಿ ವ್ರತ ಆಚರಣೆ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದಿವಾನ್ಸ್ ರಸ್ತೆಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಅಲ್ಲದೆ ದಟ್ಟಗಳ್ಳಿಯ ನೇತಾಜಿ ಸರ್ಕಲ್‍ನಲ್ಲಿರುವ ಮಹಾಲಕ್ಷ್ಮೀ ದೇವಸ್ಥಾನದಲ್ಲೂ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಚಾಮುಂಡೇಶ್ವರಿಗೆ ವಿಶೇಷ ಪೂಜೆ:
ವರ ಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳನ್ನು ನಡೆಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಮನೆಗಳಲ್ಲಿ ಪೂಜೆ ಸಲ್ಲಿಸಿದ ಭಕ್ತರು ನಂತರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಇದರಿಂದ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಅಲ್ಲದೆ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ, ಲಕ್ಷ್ಮೀ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನೆರವೇರಿಸಲಾಯಿತು.
ಹಿಂದೂ-ಮುಸ್ಲಿಂ ದಂಪತಿಯಿಂದ ಹಬ್ಬ
ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕೋಟೆ ಹುಂಡಿಯಲ್ಲಿ ಮುಸ್ಲಿಂ ಕುಟುಂಬವೊಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆ ಸಾರಿತು. ಕೋಟೆ ಹುಂಡಿಯಲ್ಲಿರುವ ಜಾಕೀರ್ ಹುಸೇನ್ ಹಾಗೂ ಮಮತಾ ದಂಪತಿ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದರು. ಇವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈಗ ಹಿಂದೂ-ಮುಸ್ಲಿಂ ಎರಡೂ ಧÀರ್ಮದ ಹಬ್ಬಗಳನ್ನು ಆಚರಿಸುವ ಮೂಲಕ ಸೌಹಾರ್ದತೆ ಮೆರೆಯುತ್ತಿz್ದÁರೆ. ಸುಮಾರು 7 ವರ್ಷದಿಂದ ಈ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬ ಆಚರಣೆ ಮಾಡಲಾಗುತ್ತಿದೆ.