ಬ್ರಿಟಿಷರು ವ್ಯಾಪಾರಕ್ಕೆಂದು ಬಂದÀು ನಮ್ಮನ್ನು ದಾಸ್ಯಕ್ಕೆ ತಳ್ಳಿದರು: ಶಂಕರ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.17- ಬ್ರಿಟಿಷರು ವ್ಯಾಪಾರಕ್ಕೆಂದು ಬಂದು ಇನ್ನೂರು ವರ್ಷಗಳ ಕಾಲ ನಮ್ಮನ್ನು ದಾಸ್ಯಕ್ಕೆ ತಳ್ಳಿದರು ಎಂದು ವರ್ತಕರ ಸಂಘದ ಅಧ್ಯಕ್ಷ ಎನ್. ಶಂಕರ್ ತಿಳಿಸಿದರು.
ಅವರು ನಗರದ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಬ್ರಿಟಿಷರು ವ್ಯಾಪಾರಕ್ಕೆಂದು ಬಂದು ಇನ್ನೂರು ವರ್ಷಗಳ ಕಾಲ ನಮ್ಮನ್ನು ದಾಸ್ಯಕ್ಕೆ ತಳ್ಳಿದರು. ಮಹಾತ್ಮಾಗಾಂಧಿ ಅವರು ಯಶಸ್ವಿಯಾಗಿ ಸತ್ಯ, ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟರು. ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಹೋರಾಟದ ಫಲವಾಗಿ ಬಂದಿರುವ ಸ್ವಾತಂತ್ರ್ಯವನ್ನು ಜೋಪಾನ ಮಾಡುವ ಜೊತೆಗೆ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರು ಶ್ರಮಿಸೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಗೌರವ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಬಹಳ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಫಲಾಮೃತ ಎಸ್. ಕೃಷ್ಣಮೂರ್ತಿ ಅವರನ್ನು ಸಂಘದ ಅಧ್ಯಕ್ಷ ಎನ್. ಶಂಕರ್ ಶಾಲು ಹೊದಿಸಿ, ಫಲತಾಂಬುಲ ನೀಡಿ ಸನ್ಮಾನಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಎಸ್‍ಆರ್‍ಎಸ್ ಶ್ರೀನಿವಾಸ್, ಎ. ಜಯಸಿಂಹ, ಎಸ್. ಬಾಲಸುಬ್ರಮಣ್ಯ, ಕಮಲ್‍ರಾಜ್, ಅಂಕಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.