ಆ.18 ರಂದು ಕಾವ್ಯಾಮೃತ ಲೋಕಾರ್ಪಣೆ
ಕಲಬುರಗಿ:ಆ.16: ನಟ, ನಿರ್ದೇಶಕ ಹಾಗೂ ಸಾಹಿತಿ ಸುನಿಲ್ ಚೌಧರಿ ಅವರು ರಚಿಸಿರುವ ಕಾವ್ಯಾಮೃತ ಕವನ ಸಂಕಲನ ಲೋಕಾರ್ಪಣೆ ಸಮಾರಂಭ ಇದೇ ಆ.18ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್.ವಿ.ಪಿ ವೃತ್ತದಲ್ಲಿರುವ ಮರಾಠಿ ಸಾಹಿತ್ಯ ಮಂಡಳಿ ಸಭಾಂಗಣದಲ್ಲಿ ನಡೆಯಲಿದೆ.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಈ ಕುರಿತು ಮಾಹಿತಿ ನೀಡುತ್ತಾ, ಹಿರಿಯ ಸಾಹಿತಿ ಡಾ.ಸ್ವಾಮಿರಾವ್ ಕುಲಕರ್ಣಿ ಸಮಾರಂಭ ಉದ್ಘಾಟಿಸಲಿದ್ದು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಕೃತಿ ಪರಿಚಯ ಮಾಡಿಕೊಡಲಿದ್ದು, ಹಿರಿಯ ಸಾಹಿತಿಗಳಾದ ರವೀಂದ್ರ ಕರ್ಜಗಿ ಹಾಗೂ ಸಿದ್ದರಾಮ ಪೆÇಲೀಸ್ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೃತಿ ರಚಿಸಿರುವ ಸುನಿಲ್ ಚೌಧರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬಡಿಗೇರ ವಿವರಿಸಿದರು.
ನಿರ್ಮಾಪಕ ನಾಗೇಂದ್ರ ಗದ್ವಾಲ್ ಹಾಗೂ ಲೇಖಕ ಸುನಿಲ್ ಚೌಧರಿ ಇದ್ದರು.