ತಾಲೂಕಾ ಆಡಳಿತದಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ
ಕೊಲ್ಹಾರ:ಆ.16: ಭಾರತ ದೇಶವನ್ನು ಬ್ರಿಟಿಷರ ಆಳ್ವಿಕೆಯಿಂದ ವಿಮುಕ್ತಿಗೊಳಿಸಲು ನಡೆಸಿದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಎಲ್ಲಾ ಮಹಾತ್ಮರ ತ್ಯಾಗ ಬಲಿದಾನವನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದು ತಹಶೀಲ್ದಾರ್ ಎಸ್.ಎಸ್ ನಾಯಕಲಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಎಂ.ಪಿ.ಎಸ್ ಶಾಲೆ ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತವನ್ನು ಬ್ರಿಟಿಷರು ಸುಮಾರು ಎರಡು ನೂರು ವರ್ಷಗಳ ಕಾಲ ಆಳಿದ್ದು, ಸ್ವಾತಂತ್ರ್ಯ ಕ್ಕಾಗಿ ಹೋರಾಟಕ್ಕೆ ಧುಮುಕುತ್ತಿದ್ದ ಭಾರತೀಯರನ್ನು ಒಡೆದು ಆಳುವ ಮೂಲಕ ಕುತಂತ್ರದ ಬುದ್ದಿಯಿಂದ ಬ್ರಿಟಿಷರು ಭಾರತೀಯರಲ್ಲಿ ಒಗ್ಗಟ್ಟು ಮೂಡದಂತೆ ಪ್ರಯತ್ನ ಗಳನ್ನು ಮಾಡುತ್ತಿದ್ದರು ಎಂದು ಹೇಳಿದರು
ದೇಶದ ಸ್ವಾತಂತ್ರ್ಯಕ್ಕಾಗಿ ಸುಭಾಷ್ ಚಂದ್ರಭೋಸ್, ಭಗತ್ ಸಿಂಗ್’, ಮಹಾತ್ಮಗಾಂಧಿ ಸೇರಿದಂತೆ ಅನೇಕ ಮಹಾತ್ಮರು ತಂಡಗಳನ್ನು ಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಸಮರ ಸಾರಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಅನೇಕ ಮಹಾನಿಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಹಾಗಾಗಿ ಅವರ ತ್ಯಾಗ-ಬಲಿದಾನವನ್ನು ನಾವೆಲ್ಲರೂ ಸ್ಮರಿಸಬೇಕಿದೆ ಎಂದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ದೇಶಭಕ್ತಿ ಗೀತೆ ಗಾಯನ, ನೃತ್ಯ ಪ್ರದರ್ಶನ, ನಾಟಕ ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು.
ಈ ಸಂದರ್ಭದಲ್ಲಿ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ್, ಪಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ, ಕೃ.ಮೇ.ಯೋ ಪು.ಪು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಆಯ್ ಶೀಲವಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಿe ತೆಲ್ಲೂರ ಕೃಷಿ ಅಧಿಕಾರಿ ಎಂ.ಕೆ ಪುರೋಹಿತ, ಶಿರಸ್ತೆದಾರ ಕೃಷ್ಣ ಗುಡೂರ,ಪ.ಪಂ ಸಿ ಎಸ್ ಗಿಡ್ಡಪ್ಪಗೋಳ, ನಿಂಗು ಗಣಿ ಸದಸ್ಯ ಬಾಬು ಬಜಂತ್ರಿ, ಶ್ರೀಶೈಲ ಮುಳವಾಡ ಅಪ್ಪಾಸಿ ಮಟ್ಟಿಹಾಳ ವಿಜಯ ಮಹಾಂತೇಶ್ ಗಿಡ್ಡಪ್ಪಗೋಳ ತೌಶಿಪ ಗಿರಗಾಂವಿ,ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಸಹಿತ ಅನೇಕರು ಉಪಸ್ಥಿತರಿದ್ದರು,