ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ: ಬಂಡೆಪ್ಪ ಖಾಶೆಂಪುರ್ ಭಾಗಿ
ಬೀದರ್ :ಆ.16: ಬೀದರ್ ನಗರದ ಶ್ರೀ ಸಾಯಿ ಆದರ್ಶ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.
ಬಳಿಕ ಅವರು, ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬೊಮಗೊಂಡೇಶ್ವರ ಸರ್ಕಲ್ ನಲ್ಲಿರುವ ಮಹಾತ್ಮ ಬೊಮಗೊಂಡೇಶ್ವರ ಮೂರ್ತಿಗೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಭಾವಚಿತ್ರಕ್ಕೆ, ಮಾಲಾರ್ಪಣೆ ಮಾಡಿದರು.
ಇದೇ ವೇಳೆ ಬಂಡೆಪ್ಪ ಖಾಶೆಂಪುರ್ ರವರು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಜಯಂತೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡು, ಅಭಿಮಾನಿಗಳೊಂದಿಗೆ ಸ್ಟೆಪ್ ಹಾಕಿದರು. ಅಭಿಮಾನಿಗಳು ಬಂಡೆಪ್ಪ ಖಾಶೆಂಪುರ್ ರವರನ್ನು ಹೆಗಲ ಮೇಲೆ ಕೂರಿಸಿಕೊಂಡು ಡ್ಯಾನ್ಸ್ ಮಾಡಿದರು.