ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ
ಧಾರವಾಡ,ಆ16: ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು. ಸರಕಾರದ ಎಲ್ಲ ಜನ ಕಲ್ಯಾಣ ಕಾರ್ಯಕ್ರಮಗಳು ಬಡವರಿಗೆ , ಅರ್ಹರಿಗೆ ತಲುಪಿಸುವಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಫಲಾನುಭವಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.
ಅವರು ಜಿಲ್ಲಾಡಳಿತದಿಂದ ಆರ್.ಎನ್.ಶಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೇರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೆÇಲೀಸ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೆÇಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನ ಸಮಿತಿ ಅಧ್ಯಕ್ಷ ಆರ್.ಎಸ್.ಪಾಟೀಲ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಆರ್ ಸಿಎಚ್‍ಓ ಡಾ.ಸುಜಾತಾ ಹಸವಿಮಠ, ಸ್ಮಾರ್ಟ ಸಿಟಿ ಜಂಟಿ ನಿರ್ದೇಶಕ ಅಜೀಜ್ ದೇಸಾಯಿ, ಹುಡಾ ಆಯುಕ್ತ ಸಂತೋಷ ಬಿರಾದಾರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸಿದ್ದರು.