ಸಾರಿಗೆ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಹುಬ್ಬಳ್ಳಿ,ಆ16: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಧ್ವಜಾರೋಹಣ ನೆರವೇರಿಸಿ ಶ್ಲಾಘನೀಯ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗಳಿಗೆ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು.
ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಅಧಿಕಾರಿಗಳಾದ ಸದಾನಂದ ಒಡೆಯರ, ಐ.ಐ. ಕಡ್ಲಿಮಟ್ಟಿ ಐ.ಜಿ. ಮಾಗಾಮಿ, ವಿಭಾಗೀಯ ಭದ್ರತಾ ಅಧೀಕ್ಷಕಿ ಸುಮಂಗಲ ಹಿರೇಮಠ ಮೇಲ್ವಿಚಾರಕರುಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರು ಮತ್ತಿತರರು ಇದ್ದರು.