78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡದೆ: ರಾಷ್ಟ್ರ ಧ್ವಜಕ್ಕೆ ಅವಮಾನ
ಸಂಜೆವಾಣಿ ವಾರ್ತೆ
ಹನೂರು ಆ 16 : ಬಂಡಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆ ಶಾಲೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸದೆ. ಶಾಲೆಗೆ ಬೀಗ ಹಾಕಿ ಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ದಿನ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಗ್ರಾಮದ ಸಾಮಾಜಿಕ ಕಾರ್ಯಕರ್ತ ಎಂ.ನಾಗರಾಜು ಅವರು ಆರೋಪ ಮಾಡಿದ್ದಾರೆ.
ತಾಲೂಕಿನ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಗಿ ಅರವತ್ತು ವರ್ಷಗಳೇ ಕಳೆದು ಅಲ್ಲಿಂದ ಇಲ್ಲಿಯ 77 ವರ್ಷಗಳಿಂದಲೂ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯಲ್ಲಿ ರಾಷ್ಟ್ರ ಧ್ವಜ ಧ್ವಜಾರೋಹಣವನ್ನು ನೆರವೇರಿಸಿ ಶಾಲೆಯ ಆಡಳಿತ ಮಂಡಳಿ ಗೌರವ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಿಕೊಂಡು ಬಂದಿದ್ದಾರೆ.
ಈ ವರ್ಷ ಶಾಲೆಗೆ ಬೀಗ ಹಾಕಿ ಸಾರ್ವಜನಿಕರಿಂದ ನಿಂದನೆಗೆ ಒಳಗಾಗಿದ್ದು. ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸದೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಡಳಿತ , ಬಿ.ಇ.ಓ ಅಧಿಕಾರಿಗಳು ಇದರ ಬಗ್ಗೆ ತನಿಖೆ ಮಾಡಿ ತಪ್ಪಿಸ್ಥರ ವಿರುದ್ಧ ಕ್ರಮ ಕೊಂಡು ಮುಂದಿನ ವರ್ಷವಾದರೂ ನಮ್ಮ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.