ಮಾರ್ಟಳ್ಳಿ 78ನೇ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
ಸಂಜೆವಾಣಿ ವಾರ್ತೆ
ಹನೂರು ಆ 16 :- ತಾಲೂಕಿನ ಮಾರ್ಟಳ್ಳಿ ಸೆಂಟ್ ಮೇರಿಸ್ ವಿದ್ಯಾ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಶಾಲೆಯ ವ್ಯವಸ್ಥಾಪಕರಾದ ಫಾ ಟೆನ್ನಿ ಕುರಿಯನ್ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ಮಾಡಿ ಭಾಷಣ ನೀಡಿದರು.ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿಯ ಹಾಡುಗಳು,ವೇಷಭೂಷಣ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸೆಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ ಕ್ರಿಸ್ಟೋಫರ್ ಕ್ಲಾರೆಟ್,ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ನದಿಯಾ ರಾಮಲಿಂಗಂ,ವಿವಿಧ ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.