ಜಾತ್ರೆಯ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ
ಬಸವನಬಾಗೇವಾಡಿ:ಆ.೧೬: ಪಟ್ಟಣದಲ್ಲಿ ಆಗಸ್ಟ್ ೨೬ ರಿಂದ ಐದು ದಿನಗಳವರೆಗೆ ನಡೆಯಲಿರುವ ಬಸವೇಶ್ವರ ಜಾತ್ರೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಹಶೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಬಸವೇಶ್ವರ ಜಾತ್ರೆಯ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಗೆ ಯಾವುದೇ ರೀತಿಯ ಭಂಗ ಬರದಂತೆ ಶಾಂತಿಯುತವಾಗಿ ಜಾತ್ರೆ ನಡೆಯುವಂತೆuಟಿಜeಜಿiಟಿeಜ ಜಾತ್ರಾ ಉತ್ಸವ ಸಮಿತಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಜಾತ್ರೆಗೆ ಭಂಗ ತರುವಂತಹ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಯ ಬಸವೇಶ್ವರ ಜಾತ್ರೆಯು ಇತರರಿಗೆ ಮಾದರಿಯಾಗುವಂತೆ ಎಲ್ಲರ ಸಹಕಾರ ಪಡೆದುಕೊಂಡು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಡಿ.ವೈ.ಎಸ್.ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಜಾತ್ರೆಯಲ್ಲಿ ಟ್ರಾಫಿಕ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಾತ್ರೆ ಸಂದರ್ಭದಲ್ಲಿ ಪಟ್ಟಣದ ಮುಖ್ಯ ರಸ್ತೆಗಳ ಎರಡು ಬದಿಯಲ್ಲಿ ಸಾರ್ವಜನಿಕರು ತಮ್ಮ ಬೈಕ್ ಹಾಗೂ ಇತರೆ ವಾಹನಗಳನ್ನು ನಿಲ್ಲಿಸದೇ ನಿಗಧಿ ಪಡಿಸಿದ ಸ್ಥಳದಲ್ಲಿ ನಿಲುಗಡೆ ಮಾಡುವ ಮೂಲಕ ಪಲ್ಲಕ್ಕಿ ಉತ್ಸವ, ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಬರುವ ಜನರಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಜಾತ್ರಾ ಉತ್ಸವ ಸಮಿತಿಯವರು ಜಾತ್ರೆಯ ಸಂದರ್ಭದಲ್ಲಿ ಸ್ವಯಂಸೇವಕರನ್ನು ನಿಯೋಜಿಸಬೇಕು. ವಿವಿಧೆಡೆ ತಾತ್ಕಾಲಿಕ ಸಿಸಿ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ ಅವರು, ಜಾತ್ರೆಗೆ ನಮ್ಮ ಇಲಾಖೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.
ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರ ಶೇಖರ ಗೊಳಸಂಗಿ ಮಾತನಾಡಿ, ಪಟ್ಟಣದ ಬಸವೇಶ್ವರ ಜಾತ್ರೆಗೆ ರಾಜ್ಯದ ವಿವಿಧ ಜಿಲ್ಲೆ ಸೆರಿದಂತೆ ವಿವಿಧ ರಾಜ್ಯದ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಕದುಡುವ ಕೆಲಸ ಮಾಡುವ ಸಾಧ್ಯತೆಗಳಿರುತ್ತವೆ. ಅಂತಹವರ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಬೇಕು. ಪಲ್ಲಕ್ಕಿ ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಟ್ರಾಫಿಕ್ ನಿಯಂತ್ರಿಸುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಧಿಕಾರಿ ಬಸವರಾಜ ಚಿನಿವಾಲ, ಸಿಪಿಐ ವಿಜಯ ಮುರಗುಂಡಿ, ಮುಖಂಡರಾದ ಸಂಜು ಬಿರಾದಾರ, ಎಂ.ಬಿ.ತೋಟದ, ಶ್ರೀಕಾಂತ ಪಡಶೆಟ್ಟಿ, ಸಂಗಮೇಶ ವಾಡೇದ, ಮಲ್ಲಿಕಾಜರ್‌uಟಿಜeಜಿiಟಿeಜನ ಪಡಶೆಟ್ಟಿ ಮಾತನಾಡಿದರು.
ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಗುರುಲಿಂಗ ಬಸರಕೋಡ, ಮುಖಂಡರಾದ ಬಸವರಾಜ ಗೊಳಸಂಗಿ, ಬಸವರಾಜ ಹಾರಿವಾಳ, ಹೆಸ್ಕಾಂ ಇಲಾಖೆ ಶಾಖಾಧಿಕಾರಿ ಎಂ.ಎಲ್.ರಜಪೂತ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಆರೋಗ್ಯ ಇಲಾಖೆಯ ಸಿ.ಎಸ್.ಹದಿಮೂರ, ಇದ್ದರು.
ಮುಖಂಡ ರವಿ ರಾಠೋಡ ನಿರೂಪಿಸಿದರು, ಸಂಗಮೇಶ ಓಲೇಕಾರ ವಂದಿಸಿದರು.