ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸಂವಹನ ಇಲಾಖೆಯಿಂದ ಪ್ರಧಾನಮಂತ್ರಿ ದೂರದರ್ಶಿತ್ವ-2047 ಕುರಿತು ವಿಶೇಷ ಕಾರ್ಯಕ್ರಮ
ಕಲಬುರಗಿ:ಆ.15:ಭಾರತ ಸರಕಾರದ ಕೇಂದ್ರ ಸಂವಹನ ಇಲಾಖೆ ಹಾಗೂ ಕಲಬುರಗಿ ನಗರೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ಹಾಗೂ ಪ್ರಧಾನಮಂತ್ರಿ ದೂರದರ್ಶಿತ್ವ-2047 ಕುರಿತು ವಿಷೇóóಷ ಕಾರ್ಯಕ್ರಮವನ್ನು ಗುರುವಾರ ಕಲಬುರಗಿ ನಗರದ ನಗರೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಯಿತು.
ಶ್ರೀ ನಗರೇಶ್ವರ ವೆಲ್‍ಫೇರ್ ಸೊಸೈಟಿಯ ಅಧ್ಯಕ್ಷ ರಾಘವೇಂದ್ರ ಮೈಲಾಪುರ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಗರೇಶ್ವರ ವೆಲ್‍ಫೇರ್ ಸೊಸೈಟಿಯ ಗೌರವ ಕಾರ್ಯದರ್ಶಿ ಸಂಜೀವ ಗುಪ್ತಾ ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡಿದರು. ಪ್ರಾಸ್ತಾವಿಕವಾಗಿ ಪ್ರಭುಲಿಂಗ ಎನ್ ಕಿಣಗಿ ಅವರು ಮಾತನಾಡಿದರು.
ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಸಂಗೀತ ಮತ್ತು ನಾಟಕ ವಿಭಾಗ ವತಿಯಿಂದ “ಸ್ವಾತಂತ್ರ್ಯ” ನಾಟಕ ಪ್ರದರ್ಶನ ನಡೆಸಲಾಯಿತು. ಲೋಹಿಯಾ ಕಲಾ ತಂಡ ಕಲಬುರಗಿ ಕಲಾವಿದರಿಂದ ಕಾರ್ಯಕ್ರಮ ನಡೆಯಿತು. ಕಲಬುರಗಿ ಕೇಂದ್ರ ಸಂವಹನ ಇಲಾಖೆಯಿಂದ ರಂಗೋಲಿ, ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ನಗರೇಶ್ವರ ವೆಲ್ ಫೇರ್ ಸೊಸಾಯಿಟಿ ಶಿಕ್ಷಣ ಸಮಿತಿಯ ಅಧ್ಯಕ್ಷ ಶ್ರೀಕಾಂತ ಜಾಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಖಚಾಂಚಿಗಳಾದ ಮಾಣಿಕ ಮಂದಕನಳ್ಳಿ ಹಾಗೂ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಸಹಾಯಕ ನಾಗಪ್ಪಾ ಅಂಬಾಗೋಳ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ದೂರದರ್ಶಿತ್ವ-2047 ಕುರಿತು ಫಲಕಗಳನ್ನು ಪ್ರದರ್ಶಿಸಲಾಯಿತು.