ರಸ್ತೆ ಅಪಘಾತದಲ್ಲಿ ಯುವಕ ಸಾವು
ಕಲಬುರಗಿ,ಆ.15-ಹುಮನಾಬಾದ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರಗಿಯ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತನನ್ನು ಸೈಯದ್ ಅನಸ್ ತಂದೆ ಎಸ್.ಕೆ.ಸಯಿದ್ (26) ಎಂದು ಗುರುತಿಸಲಾಗಿದೆ.
ಸೈಯದ್ ಅನಸ್ ಅವರ ತಂದೆ ಎಸ್.ಕೆ.ಸಯಿದ್ ಅವರು ಕಲಬುರಗಿಯಲ್ಲಿ ಆರ್‍ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ತಿಳಿದುಬಂದಿದೆ.
ಕಲಬುರಗಿಯಿಂದ ಹೈದ್ರಾಬಾದಗೆ ಬೈಕ್ ಮೇಲೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.