ಯಾದವಾಡ ಕುಟುಂಬಕ್ಕೆ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ವಿತರಿಸಿದ ಶಾಸಕ ಲಕ್ಷ್ಮಣ ಸವದಿ
ಅಥಣಿ : ಅ.1:ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಭಾಗೀರಥಿ ನಾಲಾ (ಮಸೂಬಾನ ಹಳ್ಳ) ದಲ್ಲಿ ಕೊಚ್ಚಿ ಹೋಗಿ ಮೃತ ಪಟ್ಟಿದ್ದ ಪಟ್ಟಣದ ನಿವಾಸಿ ಗುರುರಾಜ ಯಾದವಾಡ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪತ್ರವನ್ನು ಮೃತರ ಕುಟುಂಬದವರಿಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ವಿತರಿಸಿದರು.
ಪರಿಹಾರ ಆದೇಶ ಪತ್ರವನ್ನು ವಿತರಿಸಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ಕಳೆದು ಹೋದ ಸಮಯ. ಹೋದ ಪ್ರಾಣ ವಾಪಸ ತರಲು ಸಾಧ್ಯವಿಲ್ಲ. ಈ ರೀತಿ ಅವಘಡಗಳು ಸಂಭವಿಸದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಸರ್ಕಾರದಿಂದ ಮೃತರ ಕುಟುಂಬದವರಿಗೆ 5 ಲಕ್ಷ ರೂಗಳ ಪರಿಹಾರದ ಆದೇಶ ಪತ್ರವನ್ನು ನೀಡಲಾಗಿದೆ ಅದನ್ನು ಕುಟುಂಬ ನಿರ್ವಹಣೆಗೆ ಉಪಯೋಗಿಸಿಕೊಳ್ಳಬೇಕು. ಮೃತರ ಕುಟುಂಬಕ್ಕೆ ಭಗವಂತನು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿ. ಆ ಕುಟುಂಬದವರ ಜೊತೆ ನಾನು ಯಾವತ್ತೂ ಇರುತ್ತೇನೆ ಎಂದು ಧೈರ್ಯ ತುಂಬಿದರು.
ಈ ವೇಳೆ ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ. ಉಪಾಧ್ಯಕ್ಷ ಭುವನೇಶ್ವರಿ ಯಕಂಚ್ಚಿ. ಗ್ರೇಡ್ 2 ತಹಶೀಲ್ದಾರರಾದ ಗುಡಮೆ ಸರ್. ಮಹಾದೇವ ಬಿರಾದಾರ. ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ. ಅಥಣಿ ಹೋಬಳಿ ಕಂದಾಯ ನಿರೀಕ್ಷಕ ಶಿವಾನಂದ ಮೇಣಸಂಗಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.