ಸಂಭ್ರಮದ ಸ್ವಾತಂತ್ರ್ಯೋತ್ಸವ
ಲಕ್ಷ್ಮೇಶ್ವರ,ಆ15: ಪಟ್ಟಣದ ಪುರಸಭೆಯ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪುರಸಭೆಯ ಮುಖ್ಯ ಅಧಿಕಾರಿ ಮಹೇಶ್ ಹಡಪದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರು ತ್ಯಾಗ ಬಲಿದಾನ ಮಾಡಿದ್ದಾರೆ ಅವರ ತ್ಯಾಗ ಬಲಿದಾನದ ಫಲವಾಗಿ ದೊರೆತಿರುವ ಸ್ವಾತಂತ್ರ್ಯವನ್ನು ಅರ್ಥೈಸಿಕೊಂಡು ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಶ್ವಿನಿ ಅಂಕಲಕೋಟಿ ರಾಜು ಕುಂಬಿ ಪ್ರವೀಣ ಬಾಳಿಕಾಯಿ ಸಾಹೇಬ್ ಜಾನ್ ಹವಾಲಾ ಮಾತನಾಡಿದರು. ಕಂದಾಯ ಅಧಿಕಾರಿ ಶಿವಾನಂದ ಅಜ್ಜಣ್ಣನವರ ಪ್ರಾಸ್ತಾವಿಕ ಮಾತನಾಡಿದರು ಇದೇ ಸಂದರ್ಭದಲ್ಲಿ ಪುರಸಭೆಯ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆಯ ಸದಸ್ಯರು ಹಾಜರಿದ್ದರು.
ಹನುಮಂತ ನಂದಣ್ಣನವರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.