ಬೀದರ್ ನಲ್ಲಿ ನೂತನ ಪಕ್ಷಿಧಾಮ ನಿರ್ಮಾಣಕ್ಕೆ ಕ್ರಮ: ಈಶ್ವರ್ ಖಂಡ್ರೆ
ಬೀದರ್:ಆ.15: ಬೀದರ್ ಜಿಲ್ಲೆಯ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನೂತನ ಪಕ್ಷಿಧಾಮ ಸ್ಥಾಪಿಸಲು ಕ್ರಮ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಸುದ್ದಿಗೋಷ್ಡಿ ಉದ್ದೇಶಿಸಿ ಮಾತನಾಡಿರುವ ಅವರು, ಅರಣ್ಯ ಇಲಾಖೆಯಿಂದ ಈಗಾಗಲೇ 5 ಕೋಟಿ ಅನುದಾನ ಒದಗಿಸಲಾಗಿದೆ. ಹೆಚ್.ಎಮ್.ಟಿ ಕಂಪನಿ ಬಗ್ಗೆ ಪ್ರಸ್ತಾಪಿಸಿದ ಅವರು, ಹೆಚ್.ಎಮ್.ಟಿ ಕಂಪನಿಗೆ ನೀಡಿರುವ ಭೂಮಿ ಪಕ್ಕಾ ಅದು ಅರಣ್ಯ ಇಲಾಖೆಗೆ ಸೇರಿದ್ದು, ಅದನ್ನು ಸ್ವಾಧಿನಪಡಿಸಿಕೊಂಡು ಅರಣ್ಯ ಸಂರಕ್ಷಣೆ ಕಾಯ್ದೆ ಅಡಿ ಅದನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನನ್ನದಾಗಿದೆ. ಪ್ರಕೃತಿ ವಿಕೋಪಗಳನ್ನು ತಡೆಯಲು ಅರಣ್ಯ ಅಭಿವೃದ್ಧಿಪಡಿಸಲಾಗುವುದು. ರಾಜ್ಯದಲ್ಲಿ ಒಟ್ಡು 2 ಲಕ್ಷ 30 ಸಾವಿರ ಎಕರೆ ಭೂಮಿ ಸ್ವಾಧಿನಪಡಿಸಿಕೊಳ್ಳಲಾಗಿದ್ದು, ಅದನ್ನು ಪುನರ್ ವಾಪಸ್ಸು ಪಡೆಯಲು ಅರಣ್ಯ ಸಂರಕ್ಷಣೆ ಕಾಯ್ದೆ ಅಡಿ ಕ್ರಮ ವಹಿಸಲಾಗುವುದು. ಈಗಾಗಲೆ 20 ಸಾವಿರ ಎಕರೆ ಜಮಿನು ಸ್ವಾಧಿನಪಡಿಸಿಕೊಳ್ಳಲಾಗಿದ್ದು, ಉಳಿದ ಜಮಿನು ಸಹ ಬೇಗ ಮರಳಿ ಪಡೆಯಲಾಗುವುದೆಂದರು.
ಈ ಸಂದರ್ಭದಲ್ಲಿ ರಾಜ್ಯದ ಪೌರಾಡಳಿತ ಸಚಿವರಾದ ರಹೀಮ್ ಖಾನ್, ಸಂಸದ ಸಾಗರ್ ಖಂಡ್ರೆ,.ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರ ಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ ಬದೋಲೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಇತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.