ಸಂಭ್ರಮದಿಂದ ಜರುಗಿದ 78 ನೇ ಸ್ವಾತಂತ್ರ್ಯೋತ್ಸವ
ಅಫಜಲಪುರ:ಆ.15: ಪಟ್ಟಣದ ತಾಲೂಕು ಆಡಳಿತ ಕಚೇರಿ ವತಿಯಿಂದ ಹಮ್ಮಿಕೊಂಡ 78 ನೇ ಸ್ವಾತಂತ್ರ್ಯೋತ್ಸವ ರಾಷ್ಟ್ರ ಧ್ವಜಾರೋಹಣವನ್ನು ತಹಸೀಲ್ದಾರ ಸಂಜೀವಕುಮಾರ ದಾಸರ್ ನೆರವೇರಿಸಿ ಮಾತನಾಡಿದರು.
ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ 3 ಜನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಂ.ವೈ ಪಾಟೀಲ ವಹಿಸಿಕೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾ.ಪಂ ಇಓ ವೀರಣ್ಣಾ ಕವಲಗಿ, ಸಿಪಿಐ ಚೆನ್ನಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ವಿಜಯಮಹಾಂತೇಶ ಹೂಗಾರ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಪಾಟೀಲ, ಕ.ಸ.ನೌ. ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಗುಣಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.