ಬೆಣ್ಣೂರ್‌ಗೆ ರಾಜ್ಯಮಟ್ಟದ ವಿಶೇಷ ಪ್ರಶಸ್ತಿ
ಕಲಬುರಗಿ,ಆ.೧೫-ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಏರ್ಪಡಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ವಿಶೇಷ ಪ್ರಶಸ್ತಿ ಪಡೆದ ಫೋಟೋ ಜರ್ನಲ್ ಲಿಸ್ಟ್ ಶಿವಶರಣ ಬೆಣ್ಣೂರ್ ಅವರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ನಡೆದ ಭಾರತದ ೭೮ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪತ್ರಕರ್ತ ದೇವಯ್ಯ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಮಹಾನಗರ ಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.