ಡಿ. ದೇವರಾಜ್ ಅರಸು ಪ್ರಶಸ್ತಿಗೆ ಮಾಜಿ ಸಚಿವ ಕಾಂತಾ ಆಯ್ಕೆ
ಕಲಬುರಗಿ:ಆ.14: 2023-2024ನೇ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್.ಕೆ. ಕಾಂತಾ ಅವರಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ತಿಳಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ್ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ರೂ.ಗಳ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪೂರ್ವಾಹ್ನ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಲಿದೆ ಎಂದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಸ್.ಕೆ. ಕಾಂತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಅವರು ಹೇಳಿದರು.